Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:11 - ಕನ್ನಡ ಸಮಕಾಲಿಕ ಅನುವಾದ

11 ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:11
10 ತಿಳಿವುಗಳ ಹೋಲಿಕೆ  

ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.


ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.


“ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.


ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು