Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:18 - ಕನ್ನಡ ಸಮಕಾಲಿಕ ಅನುವಾದ

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:18
23 ತಿಳಿವುಗಳ ಹೋಲಿಕೆ  

ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.


ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.


ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.


ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.


ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು