ವಿಮೋಚನಕಾಂಡ 29:21 - ಕನ್ನಡ ಸಮಕಾಲಿಕ ಅನುವಾದ21 ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಪುತ್ರರೂ ಅವರ ವಸ್ತ್ರಗಳೂ ಪರಿಶುದ್ಧವಾಗುವ ಹಾಗೆ ಬಲಿಪೀಠದ ಮೇಲಿರುವ ರಕ್ತವನ್ನೂ, ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಪುತ್ರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಲ್ಲದೆ ಬಲಿಪೀಠದ ಮೇಲಿರುವ ರಕ್ತದಲ್ಲಿಯೂ ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮಕಿಸು. ಹೀಗೆ ಅವನೂ ಅವನ ಮಕ್ಕಳು ಅವನ ವಸ್ತ್ರಗಳ ಸಹಿತವಾಗಿ ಪ್ರತಿಷ್ಠಾಪಿತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ ಅಭಿಷೇಕತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಬೇಕು. ಹೀಗೆ ಅವನೂ ಅವನ ಮಕ್ಕಳೂ ಅವರ ವಸ್ತ್ರಗಳು ಸಹಿತವಾಗಿ ಪರಿಶುದ್ಧರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು. ಅಧ್ಯಾಯವನ್ನು ನೋಡಿ |