Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:23 - ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಲದೊಡೆಯನ್ನೂ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:23
4 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು.


“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.


ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು