Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:26
8 ತಿಳಿವುಗಳ ಹೋಲಿಕೆ  

ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.


“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.


ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.


ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


“ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು