Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:27 - ಕನ್ನಡ ಸಮಕಾಲಿಕ ಅನುವಾದ

27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:27
14 ತಿಳಿವುಗಳ ಹೋಲಿಕೆ  

“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.


ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.


ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.


ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.


ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.


ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು