ವಿಮೋಚನಕಾಂಡ 29:28 - ಕನ್ನಡ ಸಮಕಾಲಿಕ ಅನುವಾದ28 ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ. ಅಧ್ಯಾಯವನ್ನು ನೋಡಿ |