Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:34 - ಕನ್ನಡ ಸಮಕಾಲಿಕ ಅನುವಾದ

34 ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪಟ್ಟಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಿಯಾಗಲಿ ರೊಟ್ಟಿಯಲ್ಲಿಯಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು; ಅದು ದೇವರ ವಸ್ತುವಾದದರಿಂದ ಯಾರೂ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರುದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟುಬಿಡಬೇಕು. ನೀವು ಆ ರೊಟ್ಟಿಯನ್ನಾಗಲಿ ಮಾಂಸವನ್ನಾಗಲಿ ತಿನ್ನಬಾರದು. ಯಾಕೆಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:34
10 ತಿಳಿವುಗಳ ಹೋಲಿಕೆ  

ಮಾಂಸದಲ್ಲಿಯೂ, ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಡಬೇಕು.


ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.


“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.


ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು