ವಿಮೋಚನಕಾಂಡ 29:36 - ಕನ್ನಡ ಸಮಕಾಲಿಕ ಅನುವಾದ36 ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಪ್ರತಿದಿನದಲ್ಲಿಯೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಿಮಾಡುವದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿ |