Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:37 - ಕನ್ನಡ ಸಮಕಾಲಿಕ ಅನುವಾದ

37 ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:37
12 ತಿಳಿವುಗಳ ಹೋಲಿಕೆ  

ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.


ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.


ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.


“ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು