Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:38 - ಕನ್ನಡ ಸಮಕಾಲಿಕ ಅನುವಾದ

38 “ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದದ್ದೇನಂದರೆ - ಒಂದು ವರುಷದ ಎರಡು ಕುರಿಗಳನ್ನು ದಿನಂಪ್ರತಿಯೂ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:38
25 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.


“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.


ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.


ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.


“ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.


ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು