Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:41 - ಕನ್ನಡ ಸಮಕಾಲಿಕ ಅನುವಾದ

41 ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:41
11 ತಿಳಿವುಗಳ ಹೋಲಿಕೆ  

ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.


“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು