ವಿಮೋಚನಕಾಂಡ 29:42 - ಕನ್ನಡ ಸಮಕಾಲಿಕ ಅನುವಾದ42 “ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು. ಅಧ್ಯಾಯವನ್ನು ನೋಡಿ |