Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:44 - ಕನ್ನಡ ಸಮಕಾಲಿಕ ಅನುವಾದ

44 “ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು; ಆರೋನನನ್ನೂ ಅವನ ಮಕ್ಕಳನ್ನೂ ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:44
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”


ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?


ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.


ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು