Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:46 - ಕನ್ನಡ ಸಮಕಾಲಿಕ ಅನುವಾದ

46 ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ಅವರ ದೇವರಾದ ಯೆಹೋವ ದೇವರು ನಾನೇ ಎಂದು ಅವರಿಗೆ ತಿಳಿಯುವುದು. ನಾನೇ ಅವರ ದೇವರಾದ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ತಮ್ಮ ಮಧ್ಯದಲ್ಲಿ ವಾಸವಾಗುವದಕ್ಕಾಗಿಯೇ ತಮ್ಮನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವರು. ನಾನು ಅವರ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:46
17 ತಿಳಿವುಗಳ ಹೋಲಿಕೆ  

“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.


ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.


ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, ಇಸ್ರಾಯೇಲು ದೇವರ ರಾಜ್ಯವಾಯಿತು.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.


ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು