ವಿಮೋಚನಕಾಂಡ 29:9 - ಕನ್ನಡ ಸಮಕಾಲಿಕ ಅನುವಾದ9 ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.