Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:1 - ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:1
33 ತಿಳಿವುಗಳ ಹೋಲಿಕೆ  

ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.


“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.


ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು:


ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.


ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.


“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.


ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.


ಅವರು ರೆಫೀದೀಮಿನಿಂದ ಹೊರಟು, ಸೀನಾಯಿ ಮರುಭೂಮಿಗೆ ಬಂದು, ಮರುಭೂಮಿಯಲ್ಲಿ ಡೇರೆ ಹಾಕಿ, ಬೆಟ್ಟಕ್ಕೆದುರಾಗಿ ಇಳಿದುಕೊಂಡರು.


ಅದರಂತೆಯೇ ಇಸ್ರಾಯೇಲರು ಹೋರೇಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.


ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು.


ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು