ವಿಮೋಚನಕಾಂಡ 3:10 - ಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |