Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:11
13 ತಿಳಿವುಗಳ ಹೋಲಿಕೆ  

ದಾವೀದನು ಸೌಲನಿಗೆ, “ಅರಸನಿಗೆ ಅಳಿಯನಾಗಿರುವುದಕ್ಕೆ ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರವು?” ಎಂದನು.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


“ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು