Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:12 - ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:12
43 ತಿಳಿವುಗಳ ಹೋಲಿಕೆ  

ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.


“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.


ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು.


ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.


ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.


ಮೋಶೆಯ ಮಾವನಾದ ಇತ್ರೋವನ ಸಂಗಡ ಮೋಶೆಯ ಹೆಂಡತಿಯನ್ನೂ, ಅವನ ಪುತ್ರರನ್ನೂ ಮೋಶೆಯ ಬಳಿಗೆ ಅವನು ತಂಗಿದ್ದ ಮರುಭೂಮಿಯಲ್ಲಿ ದೇವರ ಬೆಟ್ಟದ ಬಳಿಗೆ ಬಂದರು.


ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.


ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.


“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.


ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.


ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು