ವಿಮೋಚನಕಾಂಡ 3:2 - ಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು. ಅಧ್ಯಾಯವನ್ನು ನೋಡಿ |