ವಿಮೋಚನಕಾಂಡ 3:4 - ಕನ್ನಡ ಸಮಕಾಲಿಕ ಅನುವಾದ4 ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೋಡುವದಕ್ಕೆ ಅವನು ದಾರಿ ಬಿಟ್ಟದ್ದನ್ನು ಯೆಹೋವನು ಕಂಡನು. ದೇವರು ಆ ಪೊದೆಯೊಳಗಿಂದ - ಮೋಶೆಯೇ, ಮೋಶೆಯೇ ಎಂದು ಕರೆದನು. ಅದಕ್ಕವನು - ಇಗೋ, ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು. ಅಧ್ಯಾಯವನ್ನು ನೋಡಿ |