Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:7
31 ತಿಳಿವುಗಳ ಹೋಲಿಕೆ  

ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,


ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.


ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.


ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,


ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.


ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.


ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,


ಯೆಹೋವ ದೇವರೇ, ನೀವು ಇದನ್ನು ನೋಡಿದ್ದೀರಿ; ಯೆಹೋವ ದೇವರೇ, ಮೌನವಾಗಿರಬೇಡಿರಿ; ನನಗೆ ದೂರವಾಗಿರಲೂ ಬೇಡಿರಿ.


ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು