Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:9 - ಕನ್ನಡ ಸಮಕಾಲಿಕ ಅನುವಾದ

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:9
22 ತಿಳಿವುಗಳ ಹೋಲಿಕೆ  

ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,


ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.


ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.


ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು