ವಿಮೋಚನಕಾಂಡ 30:10 - ಕನ್ನಡ ಸಮಕಾಲಿಕ ಅನುವಾದ10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.” ಅಧ್ಯಾಯವನ್ನು ನೋಡಿ |