ವಿಮೋಚನಕಾಂಡ 30:13 - ಕನ್ನಡ ಸಮಕಾಲಿಕ ಅನುವಾದ13 ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿ |