Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:16 - ಕನ್ನಡ ಸಮಕಾಲಿಕ ಅನುವಾದ

16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:16
9 ತಿಳಿವುಗಳ ಹೋಲಿಕೆ  

ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.


ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.


ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು