Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:29 - ಕನ್ನಡ ಸಮಕಾಲಿಕ ಅನುವಾದ

29 ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಿ ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಂಕಿದೆಲ್ಲವು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:29
10 ತಿಳಿವುಗಳ ಹೋಲಿಕೆ  

ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು.


“ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.


ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.


ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು