Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:32 - ಕನ್ನಡ ಸಮಕಾಲಿಕ ಅನುವಾದ

32 ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮೈಗೆ ಹಚ್ಚಿಕೊಳ್ಳುವದಕ್ಕೆ ಇದನ್ನು ಉಪಯೋಗಿಸಬಾರದು. ಇದರಲ್ಲಿರುವ ಜೀನಸುಗಳ ಮೇರೆಗೆ ಬೇರೆ ಕೆಲಸಕ್ಕೆ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು; ಇದನ್ನು ಮೀಸಲೆಂದು ನೀವು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧತೈಲವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:32
5 ತಿಳಿವುಗಳ ಹೋಲಿಕೆ  

ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.


ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು