Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:35 - ಕನ್ನಡ ಸಮಕಾಲಿಕ ಅನುವಾದ

35 ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪರಿಮಳದ್ರವ್ಯಕಾರರು ಮಾಡುವಂತೆ ಕಲಸಿ, ಉಪ್ಪು ಹಾಕಿ, ದೇವರ ಸೇವೆಗೆ ಸ್ವಚ್ಚವಾದ ಧೂಪದ್ರವ್ಯವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಕಲಸಿ ಉಪ್ಪು ಹಾಕಿ ದೇವರ ಸೇವೆಗೆ ಸ್ವಚ್ಫವಾದ ಧೂಪದ್ರವ್ಯವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:35
13 ತಿಳಿವುಗಳ ಹೋಲಿಕೆ  

ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.


ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.


ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.


ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು.


ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.


ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು