ವಿಮೋಚನಕಾಂಡ 31:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಯೆಹೋವನು ಮೋಶೆಗೆ ಹೀಗೆಂದನು: ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.