ವಿಮೋಚನಕಾಂಡ 31:17 - ಕನ್ನಡ ಸಮಕಾಲಿಕ ಅನುವಾದ17 ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರವಿುಸಿಕೊಂಡನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು.’” ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು. ಅಧ್ಯಾಯವನ್ನು ನೋಡಿ |