Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:2 - ಕನ್ನಡ ಸಮಕಾಲಿಕ ಅನುವಾದ

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:2
14 ತಿಳಿವುಗಳ ಹೋಲಿಕೆ  

ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.


ಆಗ ಮೋಶೆಯು ಇಸ್ರಾಯೇಲರಿಗೆ, “ನೋಡಿರಿ, ಯೆಹೋವ ದೇವರು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ಆರಿಸಿಕೊಂಡಿದ್ದಾರೆ,


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.


ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.


ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.


ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.


ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು