Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:4 - ಕನ್ನಡ ಸಮಕಾಲಿಕ ಅನುವಾದ

4 ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವೇ ಮೊದಲಾದ ಸಮಸ್ತ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ನಾನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:4
8 ತಿಳಿವುಗಳ ಹೋಲಿಕೆ  

“ಆದ್ದರಿಂದ ಬಂಗಾರದಲ್ಲಿಯೂ, ಬೆಳ್ಳಿಯಲ್ಲಿಯೂ, ಕಂಚಿನಲ್ಲಿಯೂ, ಕಬ್ಬಿಣದಲ್ಲಿಯೂ, ರಕ್ತವರ್ಣ, ಲೋಹಿತ ವರ್ಣ, ನೀಲ ವರ್ಣಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನನ್ನು, ನನ್ನ ತಂದೆ ದಾವೀದನು ಸಿದ್ಧಮಾಡಿದ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ನನ್ನ ಬಳಿಯಲ್ಲಿರುವ ಕುಶಲಕರ್ಮಿಗಳ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿ ಇರುವವನನ್ನು ನನ್ನ ಬಳಿಗೆ ಕಳುಹಿಸು.


ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.


“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.


ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು