Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:6 - ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:6
26 ತಿಳಿವುಗಳ ಹೋಲಿಕೆ  

ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ.


“ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ:


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.


ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.


ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.


ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.


ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.


ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು