Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:10 - ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:10
21 ತಿಳಿವುಗಳ ಹೋಲಿಕೆ  

ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.


ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?


ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.


ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.


“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು