Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:11
23 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.


“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು