Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:13 - ಕನ್ನಡ ಸಮಕಾಲಿಕ ಅನುವಾದ

13 ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:13
23 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,


“ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.


ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


“ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು