Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:15 - ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು; ಈ ಕಡೆಯೂ ಆ ಕಡೆಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:15
14 ತಿಳಿವುಗಳ ಹೋಲಿಕೆ  

ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


ಆ ಹಲಗೆಗಳು ದೇವರ ಕೆಲಸಗಳಾಗಿದ್ದವು. ಆ ಹಲಗೆಗಳ ಮೇಲೆ ಕೆತ್ತಿದ ಬರಹವು ದೇವರದ್ದೇ ಆಗಿತ್ತು.


ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು