Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:18 - ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: “ಅದು ಜಯಧ್ವನಿಯು ಅಲ್ಲ, ಅಪಜಯದ ಧ್ವನಿಯೂ ಅಲ್ಲ. ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಮೋಶೆ, ನನಗೆ ಕೇಳಿಸುವುದು ವಿಜಯ ಗೀತೆಯಲ್ಲ ಅದು ಅಪಜಯದ ಶೋಕ ಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತ ಶ್ಲೋಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕವನು - ನನಗೆ ಕೇಳಿಸುವದು ಜಯಧ್ವನಿಯೂ ಅಲ್ಲ, ಅಪಜಯ ಧ್ವನಿಯೂ ಅಲ್ಲ, ಉತ್ಸವಧ್ವನಿಯೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಉತ್ಸವದ ಧ್ವನಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:18
5 ತಿಳಿವುಗಳ ಹೋಲಿಕೆ  

ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.


ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು