Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:19 - ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:19
20 ತಿಳಿವುಗಳ ಹೋಲಿಕೆ  

“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.


ನಮ್ಮ ಹೃದಯಾನಂದವು ತೀರಿತು. ನಮ್ಮ ನರ್ತನವು ಶೋಕವಾಗಿ ಮಾರ್ಪಟ್ಟಿತು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.


ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.


ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: “ಅದು ಜಯಧ್ವನಿಯು ಅಲ್ಲ, ಅಪಜಯದ ಧ್ವನಿಯೂ ಅಲ್ಲ. ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.”


ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.


ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು