Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:2 - ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಆರೋನನು - ನಿಮ್ಮ ಹೆಂಡರೂ ಗಂಡುಮಕ್ಕಳೂ ಹೆಣ್ಣುಮಕ್ಕಳೂ ಕಿವಿಗೆ ಹಾಕಿಕೊಂಡಿರುವ ಚಿನ್ನದ ಮುರುವುಗಳನ್ನು ನೀವು ಕಿತ್ತು ನನಗೆ ಒಪ್ಪಿಸಿರಿ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:2
13 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.


ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.


ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.


“ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು,


ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು