Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:27
12 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.


ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.


ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು