Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:28 - ಕನ್ನಡ ಸಮಕಾಲಿಕ ಅನುವಾದ

28 ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:28
12 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ಅವರಲ್ಲಿ ಕೆಲವರು ಜಾರತ್ವ ಮಾಡಿ, ಒಂದೇ ದಿನದಲ್ಲಿ ಇಪ್ಪತ್ಮೂರು ಸಾವಿರ ಮಂದಿ ಸತ್ತರು. ನಾವು ಜಾರತ್ವ ಮಾಡದೆ ಇರೋಣ.


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.


ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.


ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,


ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.


ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು