Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:29
11 ತಿಳಿವುಗಳ ಹೋಲಿಕೆ  

“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.


ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.


“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು