Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:32 - ಕನ್ನಡ ಸಮಕಾಲಿಕ ಅನುವಾದ

32 ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:32
26 ತಿಳಿವುಗಳ ಹೋಲಿಕೆ  

ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.


ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.


ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.


ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.


ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು