Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:33 - ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕೆ ಯೆಹೋವನು - ಯಾರಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪಟ್ಟಿಯಿಂದ ನಾನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:33
13 ತಿಳಿವುಗಳ ಹೋಲಿಕೆ  

ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.


ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.


ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು