Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:35 - ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:35
10 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.


ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.


ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.


ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.


ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.


ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು