Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:4 - ಕನ್ನಡ ಸಮಕಾಲಿಕ ಅನುವಾದ

4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:4
36 ತಿಳಿವುಗಳ ಹೋಲಿಕೆ  

ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.


ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.


“ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.


ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.


ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.


ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.


ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು