Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:5 - ಕನ್ನಡ ಸಮಕಾಲಿಕ ಅನುವಾದ

5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:5
18 ತಿಳಿವುಗಳ ಹೋಲಿಕೆ  

ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.


“ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.


“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


“ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.


ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.


ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.


ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,


ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.


ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು